ಮುಖಪುಟ /ಸುದ್ದಿ ಸಮಾಚಾರ   
 

ಭೂಹಗರಣ ಆಧಾರ ರಹಿತ  ಆಚಾರ್ಯ

Dr. V.S.Acharyaಬೆಂಗಳೂರು, ನ.18: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಭೂಹಗರಣ ಹಾಗೂ ಡಿನೋಟಿಫಿಕೇಶನ್ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ಎಲ್ಲವೂ ಆಧಾರ ರಹಿತ ಎಂದು ಉನ್ನತ ಶಿಕ್ಷಣ ಸಚಿವ ಡಾ| ವಿ.ಎಸ್. ಆಚಾರ್ಯ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಮೋಟೆಬೆನ್ನೂರಿನಲ್ಲಿ ಖಾಸಗಿ ಕಾಲೇಜಿನ ಕಟ್ಟಡ ಉದ್ಘಾಟನಾ ಸಮಾರಂಭದ ನಂತರ ಸುದ್ದಿಗಾರೊಂದಿಗೆ ಮಾತನಾಡಿ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಇದರ ಬಗ್ಗೆ ಪ್ರತಿಪಕ್ಷಗಳು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಲ್ಲ ಸಲ್ಲದ ರೀತಿಯಲ್ಲಿ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಡಿನೋಟಿಫಿಕೇಶನ್‌ನ ಎಲ್ಲ ಪ್ರಕ್ರಿಯೆಗಳು ಕಾನೂನುಬದ್ಧವಾಗಿ ನಡೆದಿದೆ ಎಂದು ಸಮರ್ಥಿಸಿಕೊಂಡರು.

 

 ಮುಖಪುಟ /ಸುದ್ದಿ ಸಮಾಚಾರ